ಕನ್ನಡಮ್ಮನ ಹರಕೆ – ಕುವೆಂಪುರವರ ಕವನ

ಕನ್ನಡಮ್ಮನ ಹರಕೆ

ಕನ್ನಡಕೆ ಹೋರಾಡು
ಕನ್ನಡದ ಕಂದಾ;
ಕನ್ನಡವ ಕಾಪಾಡು
ನನ್ನ ಆನಂದಾ |

ಜೋಗುಳದ ಹರಕೆಯಿದು
ಮರೆಯದಿರು, ಚಿನ್ನಾ;
ಮರೆತೆಯಾದರೆ ಅಯ್ಯೊ
ಮರೆತಂತೆ ನನ್ನ |

ಮೊಲೆಯ ಹಾಲೆಂತಂತೆ
ಸವಿಜೇನು ಬಾಯ್ಗೆ;
ತಾಯಿಯಪ್ಪುಗೆಯಂತೆ
ಬಲುಸೊಗಸು ಮೆಯ್ಗೆ |

ಗುರುವಿನೊಳ್ನುಡಿಯಂತೆ
ಶ್ರೇಯಸ್ಸು ಬಾಳ್ಗೆ;
ತಾಯ್ನುಡಿಗೆ ದುಡಿದು ಮಡಿ
ಇಹಪರಗಳೇಳ್ಗೆ |

ದಮ್ಮಯ್ಯ ಕಂದಯ್ಯ
ಬೇಡುವೆನು ನಿನ್ನ;
ಕನ್ನಡಮ್ಮನ ಹರಕೆ,
ಮರೆಯದಿರು, ಚಿನ್ನಾ |

ಮರೆತೆಯಾದರೆ ಅಯ್ಯೊ;
ಮರೆತಂತೆ ನನ್ನ;
ಹೋರಾಡು ಕನ್ನಡಕೆ
ಕಲಿಯಾಗಿ, ರನ್ನಾ |

Leave a Reply

Your email address will not be published. Required fields are marked *